
ಕಟೀಲು ಶ್ರೀ ಕ್ಷೇತ್ರದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ : ಬಿಜೆಪಿ ಐಟಿ ಸೆಲ್ ನ ಯುವಕನ ವಿರುದ್ಧ ಕಾರ್ಕಳದಲ್ಲಿ ದೂರು ದಾಖಲು

ಕಾರ್ಕಳ : ಐತಿಹಾಸಿಕ ಧಾರ್ಮಿಕ ಹಿನ್ನಲ್ಲೆಯುಳ್ಳ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಿತ್ತರಿಸಿ ತೇಜೋವಧೆ ಮಾಡಿದ ಬಿಜೆಪಿ ಐಟಿ ಸೆಲ್ ನಲ್ಲಿರಯವ ಯುವಕನ ವಿರುದ್ದ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ ಬಿ.ಜೆ ಪ್ರಕರಣ ಕೇಂದ್ರಬಿಂದು.
ಈತ ವಾಟ್ಸ್ ಆಪ್, ಪೇಸ್ ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರಿತು ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ ಎಂದು ಸುಳ್ಳು ಸಂದೇಶ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿ, ಸಮಾಜದ ಸ್ವಾಸ್ಥ ಕೆಡಿಸುತ್ತಿದ್ದಾನೆ.
ಈ ಹಿಂದೆಯೂ ಈತ ಹಲವು ಬಾರಿ ರಾಷ್ಟ್ರ ಹಾಗೂ ರಾಜ್ಯ ಕಾಂಗ್ರೇಸ್ ನಾಯಕರ ಕುರಿತು ಅವಹೇಳನ ಪದಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಾ ಬಂದಿರುತ್ತಾನೆ.
ಈ ಹಿಂದೆ ಈತನ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಇನ್ನು ಮುಂದೆ ಇಂತಹ ರೀತಿ ಪೋಸ್ಟ್ ಹಾಕುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕಾನೂನು ಕುಣಿಕೆಯಿಂದ ಜಾರಿಕೊಳ್ಳುತ್ತಿದ್ದನು.
ತದನಂತರವೂ ರಾಜ್ಯದ ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಆಪಾದನೆಯನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹಾಕಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾನೆ.
ಆದ್ದರಿಂದ ಈ ಬಗ್ಗೆ ಕೂಡಲೇ ಅವರನ್ನು ವಿಚಾರಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ದೂರಿನಲ್ಲಿ ವಿವರಿಸಿದ್ದಾರೆ.

ಮಿಂಟ್ರಿ ಪತ್ರಕರ್ತರೆಂದ…!
ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಕಳ ತಾಲೂಕು ಬಿಜೆಪಿ ವತಿಯಿಂದ ಎಲ್ಲಾ ಗ್ರಾಮ ಪಂಚಾಯತ್ ಗಳ ಮುಂಭಾಗ ಹಾಗೂ ವಿಸ್ತೃತ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು.
ಅದೇ ದಿನ ಸಂಜೆ ಕಾರ್ಕಳ ಕಾಂಗ್ರೆಸ್ ವತಿಯಿಂದ ಶಾಸಕ ಸುನೀಲ್ ಕುಮಾರ್ ವಿರುದ್ಧ ಕಾರ್ಕಳ ವಿಸ್ತೃತ ಬಸ್ ನಿಲ್ದಾಣ ಪರಿಸರದಲ್ಲಿ ಬೃಹತ್ ಪ್ರತಿಭಟನೆ ಆಯೋಜಿತ್ತು.
ಈ ಕುರಿತು ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿತ್ತು ಹಾಗೂ ಪ್ರಸಾರ ಮಾಡಿತ್ತು.
ಸಾಮಾಜಿಕ ಜಾಲತಾಣದಲ್ಲಿ ಪ್ರಖ್ಯಾತ ಬಿ.ಜೆ ತನ್ನದೇ ವ್ಯಖ್ಯಾನದಲ್ಲಿ ಅದೆನೋ ಬರೆದು, ಕೆಲ ಮಿಂಡ್ರಿ ಪತ್ರಕರ್ತರು…. ಅನ್ನುತ್ತಾ ಉಲ್ಲೇಖಿಸಿ ಬಿಜೆಪಿ ಪ್ರತಿಭಟನೆ ಸುದ್ದಿ ಪ್ರಕಟಿಸಲು ಹಾಗೂ ಪ್ರಸಾರ ಮಾಡಲು ಹಿಂದೇಟು ಹಾಕಿದ್ದಾರೆಂಬ ದಾಟಿಯಲ್ಲಿ ಬರೆದಿದ್ದನು.
ಈ ಕುರಿತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಎಎಸ್ಪಿ ಅವರಿಗೆ ದೂರು ನೀಡಿ ಪ್ರಖ್ಯಾತ ಬಿ.ಜೆ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿತು.



























