ಕದ್ರಿ ದೇವಸ್ಥಾನದ ದ್ವಾರದ ಬಳಿ ಗೋ ಮಾಂಸ ಟೆಂಪೋ ತಡೆದ ಬಜರಂಗಿಗಳು!

Picture of RB NEWS

RB NEWS

Bureau Report

ಮಂಗಳೂರು : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆ.ಜಿ‌ಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕದ್ರಿಯಲ್ಲಿ ಅಕ್ರಮ ಗೋಮಾಂಸ ಸಾಗಟ ಪತ್ತೆ.
ಅಕ್ರಮ ಗೋಮಾಂಸ ಮಾರಾಟ ಜಾಲದ ರೂವಾರಿ ಮುಸ್ತಾನ್ ಬಂದರ್ ನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಿ.

–ಶರಣ್ ಪಂಪುವೆಲ್
ಪ್ರಾಂತ ಸಹ ಕಾರ್ಯದರ್ಶಿ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top