ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್ ಮಾಕನೂರು ಬಂಧನ

Picture of RB NEWS

RB NEWS

Bureau Report

ಬೆಂಗಳೂರು : ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಹೈಗೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ಅವರು ಮೇ 4 ರಂದು ಹೈಗೌಂಡ್ಸ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್‌ ಮಾಕನೂರು ಬಂಧಿಸಿ ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top