ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ ನೇತೃತ್ವ: ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ
ಉಡುಪಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ ಅಖಿಲಭಾರತದ 11ಬೇಡಿಕೆ ರಾಜ್ಯದ11ಬೇಡಿಕೆ ಮುಂದಿಟ್ಡು ಹೋರಾಟ ಪ್ರತಿಭಟನೆಗೆ ಕರೆ ನೀಡಿತು.



ಉಡುಪಿಯಲ್ಲಿ ಕಟ್ಟಡ ಸಂಘದ ನೇತೃತ್ವದಲ್ಲಿ ರಾಜ್ಯದ ಬೇಡಿಕೆಗಳ ಜೊತೆ ಉಡುಪಿ ಜಿಲ್ಲೆಯ ಎರಡು ಪ್ರಮುಖ ಬೇಡಿಕೆಗಳೊಂದಿಗೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಆಯೋಜಿಸಿ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಮುಖಾಂತರ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು.
ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ಶಶಿಧರ ಗೊಲ್ಲ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮುಖಂಡರಾದ ದಯನಂದ ಕೋಟ್ಯಾನ್,ಸರೋಜ,ಗಣೇಶ ನಾಯಕ್,ಸುಭಾಷ್ ನಾಯಕ್,ರಾಮ ಕಾರ್ಕಡ,ವಾಮನಪೂಜಾರಿ ಸೈಯದ್, ರಮೇಶ್, ಸಂಜೀವ ನಾಯಕ್, ಚಂದ್ರನಾಯಕ್,ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರ ಸಂಘ ದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಕೋಣಿ,ಉಡುಪಿ ಬೀಡಿ ಸಂಘದ ಅಧ್ಯಕ್ಷರಾದ ನಳಿನಿ.ಎಸ್.ಉಪಸ್ಥಿತರಿದ್ದರು.



































