ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಉಡುಪಿ ಜಿಲ್ಲಾ ಘಟಕದ ವಿವಿಧ ಪದಾಧಿಕಾರಿಗಳ ಆಯ್ಕೆ

Picture of RB NEWS

RB NEWS

Bureau Report


ನಿಟ್ಟೆ: ಅಖಿಲ ಭಾರತ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದ ಪ್ರಾಧ್ಯಾಪಕ ಪ್ರೊ.ಡಾ. ಸುರೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಉಡುಪಿಯ ಜಿ ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾ ಅಮ್ಮಣ್ಣಾಯ, ಕಾರ್ಯದರ್ಶಿಯಾಗಿ ಉಡುಪಿಯ ಜಿ ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ರಾಜೇಂದ್ರ ಕುಮಾರ್, ಎಂ.ಜಿ.ಎಂ ಕಾಲೇಜಿನ ಡಾ.ಭೈರತಿ ಅವರು ಸಹಕಾರ್ಯದರ್ಶಿಯಾಗಿ ಹಾಗೂ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಶಂಕರನಾರಾಯಣ ಅವರು ಕೋಶಾಧಿಕಾರಿಯಾಗಿ ನಿಯುಕ್ತಿಗೊಂಡಿರುವರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಶಿಕ್ಷಕ ಸಂಘದ ಇನ್ನಿತರ ಪದಾಧಿಕಾರಿಗಳ ಘೋಷಣೆಯಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top