ಕಲಾ ಸೌರಭ 2024: ಬಹುಮಾನ ಮುಡಿಗೇರಿಸಿದ ವಿಜೇತ ವಿಶೇಷ ಶಾಲೆ

Picture of RB NEWS

RB NEWS

Bureau Report

ಕಾರ್ಕಳ : ಕಲಾ ಸೌರಭ 2024 ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ಹಾಗೂ ನಗದು ಬಹುಮಾನ ತನ್ನದಾಗಿರಿಸಿದೆ.

ಆಟಿಸಮ್ ಸೊಸೈಟಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಕಲಚೇತನರ ಸಬಲೀಕರಣ ಇಲಾಖೆ ಡಾ. ಎ. ವಿ. ಬಾಳಿಗ ಆಸ್ಪತ್ರೆ ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉಡುಪಿಯ ನಾರಾಯಣ ಗುರು ಸಭಾ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಲಾ ಸೌರಭ 2024 ಕಾರ್ಯಕ್ರಮದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಅತ್ಯುತ್ತಮ ಪ್ರದರ್ಶನವನ್ನು ನೀಡಿ ಪ್ರಥಮ ಸ್ಥಾನದ ಪ್ರಶಸ್ತಿ ಹಾಗೂ ನಗದು ಬಹುಮಾನ ರೂ. 11,111 ಮುಡಿಗೇರಿಸಿ ಕೊಂಡರು.

ವಿಜೇತರಿಗೆ ಹಾಗೂ ತರಬೇತುದಾರರಿಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ತುಂಬು ಹೃದಯದ ಅಭಿನಂದಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top