
ಕಸ್ತೂರಿ ರಂಗನ್ ವರದಿ: ಉಪಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿಯುವಂತೆ ಸಹಾಯಕ ಚುನಾವಣಾಧಿಕಾರಿ ಕೋರಿಕೆ
ಉಡುಪಿ: ಭಾರತ ಚುನಾವಣಾ ಆಯೋಗವು 11-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾಷಿ೯ಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ವೇಳಾಪಟ್ಟಿಯನ್ನು ದಿನಾಂಕ: 19-09-2024 ರಂದು ಅಧಿಸೂಚನೆ ಹೊರಡಿಸಿರುತ್ತದೆ.
ಅದರಂತೆ ದಿನಾಂಕ: 21-10-2024 ರಂದು ಮತದಾನ ನಡೆಯಲಿರುವುದರಿಂದ ಪ್ರಸ್ತುತ ಉಡುಪಿ ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್ ಸದಸ್ಯರುಗಳು ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯಿಂದ ತಮ್ಮ ಗ್ರಾಮಗಳನ್ನು ಕೈಬಿಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ 11-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾಷಿ೯ಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಮನವಿಗಳು ಸ್ವೀಕೃತವಾಗಿರುತ್ತದೆ.

ಪ್ರಸ್ತುತ ಚುನಾವಣಾ ಪ್ರಕ್ರಿಯೆಯು ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಮುಗಿದ ನಂತರದಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು.
ಆದುದರಿಂದ ಚುನಾವಣಾ ಬಹಿಷ್ಕಾರವನ್ನು ಕೈಬಿಡಬೇಕಾಗಿ ಹಾಗೂ ದಿನಾಂಕ: 21-10-2024 ರಂದು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಮತದಾರರದಲ್ಲಿ
ಸಹಾಯಕ ಚುನಾವಣಾಧಿಕಾರಿ 11-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರ ಹಾಗೂ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಕೋರಿದ್ದಾರೆ.











