ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Picture of RB NEWS

RB NEWS

Bureau Report

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನ‌ರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ.

ಕಾಂಗ್ರೆಸ್ ಬೆಂಬಲಿತ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶಗೌಡ(38) ದುಷ್ಲರ್ಮಿಗಳಿಂದ ಹತ್ಯೆಗೀಡಾದವರು.

ದತ್ತ ಮಾಲೆ ಬ್ಯಾನರ್ ಹಾಕಿದ್ದ ವಿಚಾರಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತು ಗಣೇಶ್‌ ನಡುವೆ ಶುಕ್ರವಾರ ಜಗಳ ನಡೆದಿತ್ತು. ತಡರಾತ್ರಿ ಕಲ್ಮುರುಡೇಶ್ವರ ಮಠದ ಬಳಿ ಅವರನ್ನು ಕರೆಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಗಣೇಶ್ ಸಂಬಂಧಿಕರು ಆರೋಪಿಸಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಲು ಗಣೇಶ್ ಆಕಾಂಕ್ಷಿಯಾಗಿದ್ದರು. ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯಗಳಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

‘ಗಣೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸಖರಾಯಪಟ್ಟಣ ಭಾಗದಲ್ಲಿ ಪಕ್ಷ ಸಂಘಟಿಸಿದ್ದರು. ಅವರನ್ನು ಕೊಲೆ ಮಾಡಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಬಂಧಿಸಿ ಶಿಕ್ಷೆ ಕೊಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಒತ್ತಾಯಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top