ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ
RB NEWS
Bureau Report
ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ
ಕಾರ್ಕಳ : ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ನೇತೃತ್ವದಲ್ಲಿ ಕಾರ್ಕಳ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕೈಂಕರ್ಯಗಳು ನೆರವೇರಿತು.
ವರ್ಷಂಪ್ರತಿ ದೀಪಾವಳಿಯ ಸಂದರ್ಭದಲ್ಲಿ ಕಾರ್ಕಳ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಗೋಪೂಜೆಯನ್ನು ನಡೆಸಿಕೊಂಡು ಬರುತ್ತಿರುವ ಉದಯ ಶೆಟ್ಟಿ ಮುನಿಯಾಲು ಅವರು ಈ ಬಾರಿ ಪತ್ನಿ ನಮಿತಾ ಶೆಟ್ಟಿ ಅವರೊಂದಿಗೆ ಈ ಬಾರಿಯ ದೀಪಾವಳಿಯ ಸಂದರ್ಭದಲ್ಲಿಯೂ ಗೋಪೂಜೆಯಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಗೋಶಾಲೆಯ ಪ್ರಮುಖರು ಅರ್ಚಕ ಗೋಪಿನಾಥ ಪುರಾಣಿಕ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಕೆ.ಎಮ್.ಎಫ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅದ್ಯಕ್ಷ ತಾರನಾಥ ಕೋಟ್ಯಾನ್, ಪುರಸಭಾ ಸದಸ್ಯರಾದ ವಿವೇಕಾನಂದ ಶೆಣೈ, ಪ್ರತಿಮಾ ರಾಣೆ, ನಳಿನಿ ಆಚಾರ್ಯ ಕೆಡಿಪಿ ಸದಸ್ಯರಾದ ರುಕ್ಮಯ್ಯ ಶೆಟ್ಟಿಗಾರ್, ರಹೀಮ್ ಅಜೆಕಾರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ, ಸೊಸೈಟಿ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ರೀನಾ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಜೋಗಿ, ಕಡ್ತಲ ಗ್ರಾ.ಪಂ ಸದಸ್ಯ ದೀಕ್ಷಿತ್ ಶೆಟ್ಟಿ ದೊಂಡೆರಂಗಡಿ, ಧೀರಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.