ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ

Picture of RB NEWS

RB NEWS

Bureau Report

ಮಂಗಳೂರು: ಮಾನವತಾವಾದ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರು ಪ್ರತಿಸ್ಥಾಪನೆಗೈದ ಕುದ್ರೋಳಿ ಗೋಕರ್ಣ ಶ್ರೀ ಕ್ಷೇತ್ರದ ಮುಂಭಾಗದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಚುನಾವಣಾ ಪ್ರಚಾರ ಆರಂಭಿಸಿದರು.

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ದೀಪ ಪ್ರಜ್ವಲಿಸಿ, ಕಾಂಗ್ರೆಸ್ ಪಕ್ಷದ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹಿರಿಯ ನಾಯಕ ಜನಾರ್ಧನ ಪೂಜಾರಿಯವರ ಪಾದಸ್ವರ್ಶಗೈದು ಆಶೀರ್ವಾದ ಪಡೆದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹಾಗೂ ಇತರರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top