ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೊಪ್ಪಳದ ಬಿಜೆಪಿ ಸಂಸದ ಕರಡಿ ಸಂಗಣ್ಣ

Picture of RB NEWS

RB NEWS

Bureau Report

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿದ ಕರಡಿ ಸಂಗಣ್ಣನವರನ್ನ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು,ಇವತ್ತು ಸಂಭ್ರಮದ ದಿನ.ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿಕೆ ಶಿವಕುಮಾರ್ ಪಕ್ಷೇತರರವಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು.


ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂಬ ಚಾಲೆಂಜ್ ಮಾಡಿದ್ದೇವೆ ಎಂದರು.

ನಾನು ಅಧಿಕಾರಕ್ಕೆ ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದೇನೆ. ಕಾಂಗ್ರೆಸ್ ‌ಪಕ್ಷ ಸೇರ್ಪಡೆ ಖುಷಿ ಕೊಟ್ಟಿದೆ. ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ, ತ್ಯಾಗ ಬಲಿದಾನ ಮಾಡಿದ ಪಕ್ಷ ಎಂದು ಕಾಂಗ್ರೆಸ್‌ ಪಕ್ಷವನ್ನು ಹಾಡಿ ಹೊಗಳಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top