[t4b-ticker]

ಕಾಂಗ್ರೆಸ್‌ ಬೆಂಬಲದಿಂದ ಗೋ-ಹತ್ಯೆ ನಡೆಯುತ್ತಿದೆಯೇ ?

Picture of RB NEWS

RB NEWS

Bureau Report

ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ನಿರಂತರವಾಗಿ ಗೋ ಕಳ್ಳತನ, ಗೋ ಹತ್ಯೆ ಆಗುತ್ತಿದೆ. ಇದರಲ್ಲಿ ಸಿಕ್ಕ ಅಪರಾಧಿಗಳೂ ಎಲ್ಲರೂ ಕಾಂಗ್ರೆಸ್‌ ಕಾರ್ಯಕರ್ತರೆ. ಹಾಗಾಗಿ ಇವರಿಗೆ ಯಾರು ಬೆಂಬಲವಾಗಿ ನಿಂತಿದ್ದಾರೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ನಿರಂತರವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂದು ಗೊತ್ತಿದ್ದರೂ ಯಾರನ್ನು ಓಲೈಸುವುದಕ್ಕಾಗಿ ಅಂತ ಸಮಾಜ ಘಾತುಕ ಶಕ್ತಿಗಳಿಗೆ ಬೆಂಬಲ ನೀಡುತ್ತಿದ್ದಾರೆ ? ಕೇವಲ ಓಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಅವರು ಮಾಡಿದ ಸಮಾಜ ಘಾತುಕ ಕೃತ್ಯಗಳಿಗೆ ಬೆಂಬಲಿಸಿತ್ತಿರುವುದು ಸರಿಯೇ ಎಂಬುವುದು ಎಲ್ಲೆಡೆ ಚರ್ಚೆಯಾಗುತ್ತಿದೆ.

ತಮ್ಮ ರಾಜ್ಯಾಧ್ಯಕ್ಷರು ಇಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರನ್ನು ಬ್ರದರ್ಸ್‌ ಎಂದಿದ್ದರು. ಇದೀಗ ಅವರ ಅನುಯಾಯಿಗಳು ತಮ್ಮ ಬ್ರದರ್ಸ್‌ಗೆ ಬೇಸರವಾಗುತ್ತದೆ ಎಂದು ಅವರು ಮಾಡುವ ದುಷ್ಕೃತ್ಯಗಳಿಗೆ ಬೆಂಬಲಿಸುತ್ತಿರುವುದು ಅರ್ಥವಾಗುತ್ತದೆ. ಇನ್ನೊಂದೆಡೆ ಕಾರ್ಕಳದ ಶಿರ್ಲಾಲು, ನಲ್ಲೂರು, ಹಾಗೂ ತೆಳ್ಳಾರಿನಲ್ಲಿ ನಡೆದ ಈ ಮೂರು ಪ್ರಕರಣಗಳಲ್ಲಿ ಭಾಗಿಯಾಗಿರುವವರು ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿರುವವರೇ ಆಗಿದ್ದಾರೆ. ಅಪರಾಧಿಗಳು ಮತ್ತು ಅದರ ಜೊತೆಗೆ ಮುಖ್ಯವಾಗಿ ಅವರನ್ನು ಬೆಂಬಲಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಮೂಲಕ ಮುಂದೆ ಇಂತಹ ಕೃತ್ಯಗಳಲ್ಲಿ ತೊಡಗುವರಿಗೆ ಇದೊಂದು ಪಾಠವಾಗುವಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯನ್ನು ವಿನಂತಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top