

ಕಾಂತಾವರ: ನಿವೃತ್ತ ಶಿಕ್ಷಕ ಪ್ರಕಾಶ್ ಎ. ಕೋಟ್ಯಾನ್ ಅವರಿಗೆ ಅಭಿನಂದನಾ ಸಮಾರಂಭ
ಕಾಂತಾವರದ ಶ್ರೀ ಕಾಂತೇಶ್ವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಶ್ರೀ ಕಾಂತೇಶ್ವರ ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸುಮಾರು 28 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀ ಪ್ರಕಾಶ್ ಎ. ಕೋಟ್ಯಾನ್ ಅವರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 4ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಬಾರಾಡಿಬೀಡು ಡಾ. ಜೀವಂಧರ್ ಬಲ್ಲಾಳ್ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಸುಧಾಕರ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಪ್ರಕಾಶ್ ಎ. ಕೋಟ್ಯಾನ್ ಅವರ ಶೈಕ್ಷಣಿಕ ಸೇವೆಯನ್ನು ಸ್ಮರಿಸಿದರು. ಶಾಲೆಯ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಆಶಾ ಪ್ರಕಾಶ್ ಕೋಟ್ಯಾನ್, ಸಂಘದ ಕಾರ್ಯದರ್ಶಿ ರಘುನಾಥ ಶೆಟ್ಟಿ, ಶಾಲಾ ಸಂಚಾಲಕ ರಂಜಿತ್ ಶೆಟ್ಟಿ, ಸಂಘದ ಸದಸ್ಯರಾದ ಜಯೇಶ್ ಬಲ್ಲಾಳ್, ಶ್ರೀಪತಿ ರಾವ್, ಧರ್ಮರಾಜ ಕಂಬಳಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ರೇಶ್ಮಾ, ಶಿಕ್ಷಕ ವೃಂದದ ರೇಖಾ, ರಮ್ಯ, ಭವಾನಿ, ರಾಜೇಶ್ ಭಟ್ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ಶ್ರೀಮತಿ ರೇಖಾ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಭಟ್ ಧನ್ಯವಾದ ಅರ್ಪಿಸಿದರು.








































