ಕಾಂತಾವರ : ವೃದ್ಧೆಯರೇ ಆತನ‌ ಟಾರ್ಗೆಟ್! ಚಿನ್ನದ ಸರ ಕಳ್ಳ ಪೊಲೀಸರ ಬಲೆಗೆ

Picture of RB NEWS

RB NEWS

Bureau Report

ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಚ್೯ 31 ರ ಮದ್ಯಾಹ್ನ ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ ವೃದ್ಧೆಯೊಬ್ಬರ ಕರಿಮಣಿ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಇಂದಿರಾ (70) ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಕೆಂಪು ಬಣ್ಣದ ಮೋಟಾರು ಸೈಕಲಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಓರ್ವ ಕಸಿದುಕೊಂಡು ಹೋಗಿದ್ದನು. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಪ್ರಶಾಂತ್ ಸಾಲಿಯನ್ ಆಲಿಯಾಸ್ ಪಚ್ಚು ಕುಲಾಲ್ (34) ಕುಂದಿಲ್ಲ ಮನೆ, ಕಾಂತಾವರ ಗ್ರಾಮ ಮತ್ತು ಅಂಚೆ, ಕಾರ್ಕಳ ತಾಲೂಕು ಉಡುಪಿ ಜಿಲ್ಲೆ, ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯು ಈ ಮೇಲೆ ನಮೂದಿಸಿದ ಕೃತ್ಯವನ್ನು ವ್ಯಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

2024 ಡಿಸೆಂಬರ್ 02ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಅಂಬರೀಶ್ ಗುಹೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಲಿಗೆ ನಡೆಸಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ಬಗ್ಗೆ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲಿರುತ್ತದೆ.

ಪ್ರಕರಣದಲ್ಲಿ ದಸ್ತಗಿರಿ ಮಾಡಿದ ಆರೋಪಿಯಿಂದ ಮೇಲೆ ನಮೂದಿಸಿದ ಪ್ರಕರಣದಲ್ಲಿ ಸುಲಿಗೆ ಮಾಡಿದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಕೆಂಪು ಬಣ್ಣದ KA 20 X 3393 ನೇ TVS Apache ಮೊಟಾರು ಸೈಕಲ್ ನ್ನು ಕೂಡ ಸ್ವಾಧೀನ ಪಡೆಸಿಕೊಂಡಿರುವುದಾಗಿದೆ. ಸ್ವಾಧೀನ ಪಡಿಸಿಕೊಂಡಿರುವ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000/- ರೂ ಆಗಬಹುದು.

ಈ ಪ್ರಕರಣದಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ, ಡಿಸಿಪಿ ಗಳಾದ ಸಿದ್ಧಾರ್ಥ ಗೊಯಲ್ (ಕಾ&ಸು), ರವಿಶಂಕರ್ (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್. ಕೆ ರವರ ನಿರ್ದೇಶನದಂತೆ ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ರವರ ನೇತೃತ್ವದ ತಂಡ ಪಿ.ಎಸ್.ಐ ಗಳಾದ ಕೃಷ್ಣಪ್ಪ ಮತ್ತು ಪ್ರತಿಭಾ ಕೆ.ಸಿ, ಹಾಗೂ ಎ.ಎಸ್.ಐ ರಾಜೇಶ್ ಮತ್ತು ಹೆಚ್.ಸಿ ಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್ , ಪ್ರದೀಪ್ ಕುಮಾರ್ ಬಣಗರ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ ವೆಂಕಟೇಶ್ ರವರುಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top