ಕಾಪು ಪ್ರಾಧಿಕಾರದ ದಿಶೆಯಿಂದ ಮನೆ ನಿರ್ಮಾಣ ಗಗನಕುಸುಮ-ಮಣಿರಾಜ್ ಶೆಟ್ಟಿ

Picture of RB NEWS

RB NEWS

Bureau Report

ಬೈಲೂರು ಮಹಿಷ ಮರ್ದಿನಿ ಸಭಾಭವನದಲ್ಲಿನಡೆದ ಬೈಲೂರು ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರು-ಜನಪ್ರತಿನಿಧಿಗಳು ಮತ್ತು ಪಕ್ಷದಪ್ರಮುಖರ ಸಭೆಯಲ್ಲಿ ಅವರು ಮಾತನಾಡುತ್ತಾ, ಕಾಂಗ್ರೆಸ್ ಆಡಳಿತದಲ್ಲಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ತೀರಾ ತೊಂದರೆಯಾಗುತ್ತಿದ್ದುಅಭಿವೃದ್ಧಿ ಶೂನ್ಯವಾಗಿದೆ. ಹಿಂದೆ ಬಿಜೆಪಿ ಸರ್ಕಾರ ಇರುವಾಗ ಲೆಕ್ಕವಿಲ್ಲದಷ್ಟು ರಸ್ತೆಗಳು, ಸೇತುವೆಗಳು ಮಂಜೂರಾಗಿದ್ದು ಈ ಬಾರಿ ಕನಿಷ್ಠ ತೀರಾ ಅಗತ್ಯದ ಕೆಲಸಗಳಿಗೂ ಅನುದಾನ ದೊರೆಯುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್‌ನ ಕೆಲ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರವು, ಅಧಿಕಾರಿಗಳು ಜನರನ್ನು ಸುಲಿಗೆ ಮಾಡುತ್ತಿದೆ. ಇದೊಂದು ಪಿಕ್ ಪಾಕೆಟ್ ಎಂಬುದಾಗಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಸರಕಾರವನ್ನು ಟೀಕಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ವಿ. ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರಹೆಗ್ಡೆ, ಜಿಲ್ಲಾಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top