ಕಾಫಿನಾಡಿನಲ್ಲಿ ಬಜರಂಗಿಗಳ ಅಟ್ಟಹಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ : ಐವರು ಆರೋಪಿಗಳ ಬಂಧನ

Picture of RB NEWS

RB NEWS

Bureau Report

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಸಖರಾಯಪಟ್ಟಣ ಗ್ರಾಪಂ ಸದಸ್ಯ ಗಣೇಶ ಗೌಡ (38) ಬರ್ಬರವಾಗಿ ಹತ್ಯೆಯಾಗಿದೆ.‌

ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಕಾರ್ಯಕರ್ತರಾದ ಸಂಜಯ್, ನಾಗಭೂಷಣ್, ದರ್ಶನ್, ಅಜಯ್ ಹಾಗೂ ಮಿಥುನ್ ಎಂಬ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿಯ ಬ್ಯಾನ‌ರ್ ತೆರವು ವಿಚಾರವಾಗಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಈ ತಂಡಗಳ ಮಧ್ಯೆ ಶುಕ್ರವಾರ ರಾತ್ರಿಯೂ ಸಖರಾಯಪಟ್ಟಣ ಬಾರ್ ಬಳಿ ಗಲಾಟೆ ನಡೆದಿತ್ತು. ಇದಾಗಿ ಅರ್ಧ ಗಂಟೆಯ ಬಳಿಕ ಸಖರಾಯ ಪಟ್ಟಣದ ಸಮೀಪದ ಕುರುಡೇಶ್ವರ ಮಠದ ರಸ್ತೆಯಲ್ಲಿಗಣೇಶ್ ಗೌಡ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಅಡ್ಡಗಟ್ಟಿದ ಎಂಟು ಮಂದಿಯ ತಂಡ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.

ಇದರಿಂದ ತೀವ್ರ ವಾಗಿ ಗಾಯಗೊಂಡಿದ್ದ ಗಣೇಶಗೌಡರನ್ನು ಚಿಕ್ಕಮಗ ಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಖರಾಯ ಪಟ್ಟಣದಲ್ಲಿರುವ ಗಣೇಶ್ ಅವರ ಜಮೀನಿನಲ್ಲಿ ಶನಿವಾರ ಅಂತ್ಯ ಸಂಸ್ಕಾರವನ್ನು ನಡೆಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top