ಮೂಡುಬಿದಿರೆ: ಅಪ್ಪನ ಕಾಮದಾಹಕ್ಕೆ ಅಪ್ರಾಪ್ತ ಮಗಳು ಗರ್ಭಿಣಿಯಾದ ಘಟನೆ ಮೂಡುಬಿದಿರೆ ಅಳಿಯೂರು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಅಳಿಯೂರಿನ ಉಮೇಶ್ ಶೆಟ್ಟಿ (55) ಪ್ರಕರಣದ ಆರೋಪಿಯಾಗಿದ್ದಾನೆ. ಕೂಲಿ ಕಾರ್ಮಿಕನಾಗಿದ್ದ ಆತ ಕಳೆದ ಆರು ತಿಂಗಳ ಹಿಂದೆ ಮನೆಯಲ್ಲೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.
ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯಾಗಿದ್ದ ಆಕೆಯ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಹೆಚ್ಚಿನ ಪರೀಕ್ಷೆಗಾಗಿ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಆಕೆ ಆರು ತಿಂಗಳ ಗರ್ಭಿಣಿ ಎಂಬುವುದು ದೃಢಪಟ್ಟಿದೆ.
ಮಂಗಳೂರು ಮಹಿಳಾ ಪೊಲೀಸ್ಠಾಣೆಯಲ್ಲಿ ಆರೋಪಿ ವಿರುದ್ಧ ಫೊಕ್ಸ್ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಗುರುವಾರ ಮೂಡುಬಿದಿರೆ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ. ಬಂಧಿಸಿದ್ದಾರೆ.ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.