
ಕಾರ್ಕಳ : ಪಡುಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ ಇದಾಗಿದೆ.
ನಂದಳಿಕೆ ಲಕ್ಷ್ಮೀ ಜನಾರ್ಧನ ಸಮೀಪದಲ್ಲಿ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪರಿವರ್ತಕ , ವಿದ್ಯುತ್ ಕಂಬ ಹಾನಿಗೊಳಗಾಗಿದೆ.
ಘಟನೆಯಲ್ಲಿ ಕಾರು ಜಖಂಗೊಂಡಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ರೀತಿ ಉಂಟಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.














