ಕಾರ್ಕಳಕ್ಕೆ ಜ.25ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Picture of RB NEWS

RB NEWS

Bureau Report

ಬೆಂಗಳೂರು : ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಮುನಿಯಾಲು ಉದಯ ಶೆಟ್ಟಿ ಅವರ ಸಾರಥ್ಯದಲ್ಲಿ ಜನವರಿ 25 ಮತ್ತು 26 ರಂದು ಕಾರ್ಕಳದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ ಮತ್ತು ಇತರ ಪಂದ್ಯಾಕೂಟದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ರವರು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಆಹ್ವಾನ ಪತ್ರಿಕೆಯನ್ನು ನೀಡಿ ಕ್ರೀಡೋತ್ಸವಕ್ಕೆ ಆಮಂತ್ರಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top