ಕಾರ್ಕಳಕ್ಕೆ ಡಿ.ಕೆ.ಶಿವಕುಮಾರ್: ಸ್ವಾಗತ ಕೋರಿದ ಶಾಸಕ ವಿ.ಸುನೀಲ್ ಕುಮಾರ್

ಕಾರ್ಕಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರ್ಕಳದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಪಕ್ಷದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ರವಿವಾರದಂದು ಪಾಲ್ಗೊಳ್ಳಲಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಮಧ್ಯೆ ಬಿಜೆಪಿ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ಅವರು ಮಹತ್ವದ ಹೇಳಿಕೆಯೊಂದನ್ನು ಸಾಮಾಜಿಕ ಜಾಲ ತಾಣದಲ್ಲಿ ಬಿಡುಗಡೆಗೊಳಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗ್ರಾಸ್ತವಾಗಿದೆ.
ಅದು ಕೂಡಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆತ್ಮೀಯ ಸ್ವಾಗತ ಕೋರುವ ಜೊತೆಗೆ ರಾಜಕೀಯ ಕಾಲೆಳೆಯುವ ರೀತಿ ಇದಾಗಿದೆ.
ಶಾಸಕ ವಿ.ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿದ ಮಾಹಿತಿ…

ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದರೂ ಕುಂಭ ಮೇಳದಲ್ಲಿ …
ಎಐಸಿಸಿ ಮುನಿಸಿನ ಮಧ್ಯೆಯೂ ಈಶಾ ಫೌಂಡೇಶನ್ ಶಿವರಾತ್ರಿಯಲ್ಲಿ ನಿಂದ…
ಹಿಂದುವಾಗಿ ಹುಟ್ಟಿ ಹಿಂದುವಾಗಿಯೇ ಸಾಯುವೆ ಎಂದ…
ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನಸ್ಸು ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆತ್ಮೀಯ ಸ್ವಾಗತ….
ನಿಮ್ಮ ಈ ಭೇಟಿ ಹಿಂದುತ್ವ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಫಲಪ್ರದವಾಗಲಿ.
DK Shivakumar
…














