ಕಾರ್ಕಳದಲ್ಲಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬಿತ್ತು ಬೆಂಕಿ

Picture of RB NEWS

RB NEWS

Bureau Report


ಕಾರ್ಕಳ: ನಗರದ ಕರಿಯಕಲ್ಲು ಪ್ರದೇಶದಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕದ ಶೆಡ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟಕದ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಗುರುವಾರ ರಾತ್ರಿ ಸುಮಾರು 10.45ರ ವೇಳೆಗೆ ಈ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರು ಗಮನಿಸಿದ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿದರು.
ತ್ಯಾಜ್ಯ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆಂಕಿ ವೇಗವಾಗಿ ವ್ಯಾಪಿಸಿದ್ದರಿಂದ, ಅದನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು. ಹಲವು ಗಂಟೆಗಳ ಪರಿಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹರಿಪ್ರಸಾದ್, ಚಾಲಕ ಶ್ರೀಧರ್, ಭೀಮಪ್ಪ, ಬಸವರಾಜ ಸೇರಿದಂತೆ ಸಿಬ್ಬಂದಿ ಭಾಗವಹಿಸಿ ಕಾರ್ಯಾಚರಣೆ ನಡೆಸಿದರು.
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top