ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಸಾಹಿತ್ಯ-ಸಾಂಗತ್ಯ ಕಾರ್ಯಕ್ರಮ
ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಾಹಿತ್ಯ ಸ್ಪಂದನ ಎಂಬ ಹೆಸರಿನಲ್ಲಿ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯದ ಪ್ರಮುಖ ವ್ಯಕ್ತಿತ್ವಗಳಲ್ಲಿ ಒಬ್ಬರಾದ ಕಾದಂಬರಿಕಾರ, ಕವಿ, ಪತ್ರಕರ್ತ ಹಾಗೂ ಚಲನಚಿತ್ರ ಬರಹಗಾರ ಜೋಗಿ ನಾಮಾಂಕಿತ ಗಿರೀಶ್ ರಾವ್ ಹತ್ವಾರ್ , ಬರಹಗಾರ ಗೋಪಾಲಕೃಷ್ಣ ಕುಂಟಿನಿ , ಲೇಖಕ ರಾಜಶೇಖರ ಹಳೆಮನೆ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್ ಎಲ್, ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ, ಲೇಖಕ ಅನುಬೆಳ್ಳಿ ನಾಮಾಂಕಿತ ರಾಘವೇಂದ್ರ ಬಿ ರಾವ್ ರವರು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಕೆ ಎಸ್ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಬರಹಗಾರ ಮಹೇಶ್ ಕೆ ಎನ್ ಪುತ್ತೂರು ಭಾಗವಹಿಸಿದ್ದರು.
ಸಾಹಿತ್ಯದ ಕುರಿತಾಗಿ ಸಾಹಿತ್ಯ ಸ್ಪಂದನ ಎಂಬ ಹೆಸರಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ವೃಂದದವರೂ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ನಿರ್ಮಿಸಲ್ಪಟ್ಟ ಪ್ರಮೋಶನಲ್ ವಿಡಿಯೋ ವನ್ನು ಪ್ರಸ್ತುತಪಡಿಸಲಾಯಿತು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ನಿರೂಪಿಸಿ ವಂದಿಸಿದರು.





































