ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ದಶಮಾನೋತ್ಸವ ಸಂಭ್ರಮಕ್ಕೆ ಸಿದ್ಧತೆ
RB NEWS
Bureau Report
ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ದಶಮಾನೋತ್ಸವ ಸಂಭ್ರಮಕ್ಕೆ ಸಿದ್ಧತೆ
ಕಾರ್ಕಳ : ಅತ್ತೂರಿನಲ್ಲಿ ಇರುವ ಪ್ರಸಿದ್ಧ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ದಶಮಾನೋತ್ಸವ ಸಂಭ್ರಮ ಜರುಗಲಿದ್ದು, ಭಕ್ತರಲ್ಲಿ ಭಾರೀ ಉತ್ಸಾಹ ಕಂಡುಬಂದಿದೆ.
ಹಲವಾರು ಶತಮಾನಗಳ ಇತಿಹಾಸ ಹೊಂದಿರುವ ಈ ಪವಿತ್ರ ಕ್ಷೇತ್ರವು ದೇಶ-ವಿದೇಶಗಳಿಂದ ಸಾವಿರಾರು ಭಕ್ತರನ್ನು ಆಕರ್ಷಿಸುತ್ತಿದ್ದು, ಪ್ರಮುಖ ಧಾರ್ಮಿಕ ಕೇಂದ್ರವಾಗಿ ಪ್ರಸಿದ್ಧಿ ಪಡೆದಿದೆ. 2016ರ ಆಗಸ್ಟ್ 1ರಂದು ಈ ದೇವಾಲಯಕ್ಕೆ ಬಸಿಲಿಕಾ ಮಾನ್ಯತೆ ದೊರೆತಿದ್ದು, ಅದಾದ ನಂತರದಿಂದ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ದಶಮಾನೋತ್ಸವದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಗೆ ವಿಧಿವಿಧಾನಗಳಿಗೆ ಚಾಲನೆ ದೊರೆಯಲಿದ್ದು, ಬಳಿಕ ಆಶೀರ್ವಾದ, ಶಿಲಾನ್ಯಾಸ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆಯಲಿವೆ. ಜು. 10ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನ ಬಲಿ ಪೂಜೆ ನೆರವೇರಲಿದ್ದು, ನಂತರ ಸಾರ್ವಜನಿಕ ಸಭೆ ಹಾಗೂ ಧಾರ್ಮಿಕ ಉಪನ್ಯಾಸಗಳು ಜರುಗಲಿವೆ.
ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆಯೂ ಮಾಡಲಾಗಿದ್ದು, ದಿನಪೂರ್ತಿ ವಿವಿಧ ಪೂಜೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಭಕ್ತಿಗೀತೆಗಳ ಕಾರ್ಯಕ್ರಮಗಳೂ ನಡೆಯಲಿವೆ.
ದಶಮಾನೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಶಾಂತಿ, ಭಕ್ತಿ ಮತ್ತು ಏಕತೆಯ ಸಂದೇಶ ಸಾರುವ ಈ ಆಚರಣೆ ವಿಶೇಷ ಮಹತ್ವ ಪಡೆದುಕೊಂಡಿದೆ.