



ಕಾರ್ಕಳ ಗ್ರಾ. ಪಂಚಾಯತ್ ಉಪ ಚುನಾವಣೆ:
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವುಧ ಗ್ರಾಮ ಪಂಚಾಯತ್‌ಗಳ ಒಟ್ಟು 07 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಐದು ಬೆಂಬಲಿತ ಅಭ್ಯರ್ಥಿಗಳು ಜಯಭೇರಿಗಳಿಸಿದೆ.


ಈ ಕುರಿತು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿಕೆಯೊಂದನ್ನು ಹೊರಡಿಸಿದ್ದಾರೆ. ಮತದಾರರು ಭಾರತೀಯ ಜನತಾ ಪಾರ್ಟಿಯ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿ ಬೆಂಬಲಿಸಿದ್ದಾರೆ. ಜನರಿಗೆ ಬಿಜೆಪಿಯೇ ಭರವಸೆ ಎಂಬುವುದು ಖಾತ್ರಿಯಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರ ದಬ್ಬಾಳಿಕೆಗೆ ಕ್ಷೇತ್ರದ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ವಿ ಸುನಿಲ್ ಕುಮಾರ್ ಅವರ ನಿರಂತರ ಜನಸಂಪರ್ಕ ಹಾಗೂ ಕ್ಷೇತ್ರದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರಣವೆಂದಿದ್ದಾರೆ.




































