
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಪುನರಾಯ್ಕೆ ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025–2028ನೇ ಸಾಲಿನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಅವರು ಪುನರಾಯ್ಕೆಯಾಗಿದ್ದಾರೆ.ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಎಚ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಎಂ. ಖಲೀಲ್ ಮತ್ತು ಜೊತೆಗೆ ಕಾರ್ಯದರ್ಶಿಯಾಗಿ ಜಗದೀಶ್ ಅಂಡಾರು ಆಯ್ಕೆಯಾದರು.ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅರುಣ್ ಭಟ್ ಕೈಲಾಜೆ, ಹರೀಶ್ ಆಚಾರ್ಯ, ವಾಸುದೇವ ಭಟ್ ಹಾಗೂ ಅವಿನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಮಣ್ಯ ಜಿ. ಕುರ್ಯ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಹಾಯಕ ಚುನಾವಣಾಧಿಕಾರಿಯಾಗಿ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರು ಸೇವೆ ಸಲ್ಲಿಸಿದರು.
RB NEWS
Bureau Report
































