ಕಾರ್ಕಳ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ ಎನ್ ಗುರುದತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.
ಮುಲ್ಕಿ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಗುರು ಶಾಂತಪ್ಪ ರವರು ಕಾರ್ಕಳ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಫೆ. 23ರಂದು ಅಧಿಕಾರ ಸ್ವೀಕರಿಸಿರುತ್ತಾರೆ.
ನೂತನ ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಪಂ ರಾಜ್ ಹಾಗೂ ವ್ಯವಸ್ಥಾಪಕ ಹರೀಶ್ ಕೆಬಿ ಸ್ವಾಗತಿಸಿದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರಮೇಶ್ ಎಸ್ ಹಾಗೂ ಎಲ್ಲ ಸಿಬ್ಬಂದಿಯವರು ಉಪಸ್ಥಿತರಿದ್ದರು.





































