ಕಾರ್ಕಳ : ಬಡ್ಡಿ ವ್ಯಾಪಾರಿಯ ಮರ್ಡರ್

Picture of RB NEWS

RB NEWS

Bureau Report


ಕಾರ್ಕಳ : ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರ ರೀತಿಯಲ್ಲಿ ಕೊಲೆಗೈದಿದ್ದಾರೆ.
ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಅಗಮಿಸಿ ತನಿಖೆ‌ ಕಾರ್ಯ ತೀವ್ರಗೊಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್‌, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣೆ ಎಸ್ಐ ಮುರಳೀಧರ್‌ ನಾಯ್ಕ್,‌ ಗ್ರಾಮಾಂತರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top