ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ

ಕಾರ್ಕಳ : ಮುಂದಿನ 2027ರಲ್ಲಿ ನಡೆಯಲಿರುವ ಕಾರ್ಕಳದ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಾಲಯವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಜೈನ ಮಠದ ರಾಜಗುರು,ಧ್ಯಾನಯೋಗಿ ಶ್ರೀಶ್ರೀ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಚಾಚಾರ್ಯ ಮಹಾಸ್ವಾಮಿಗಳು, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ।ಎಂ. ಎನ್. ರಾಜೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕಷ ಡಾ.ಎಂ. ಮೋಹನ ಆಳ್ವ, ಅದಾನಿ ಬಳಗದ ಕಿಶೋರ್ ಆಳ್ವ,ಮಾಜಿ ಸಚಿವ ಕೆ. ಅಭಯಚಂದ್ರ ಜೈನ್,ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ ಜೈನ್,ಪ್ರಭಾತ್ ಕುಮಾರ್,ಎ. ಮೋಹನ್ ಪಡಿವಾಳ್ ಉಪಸ್ಥಿತರಿದ್ದರು.
–ವಿ. ಕೆ. ವಾಲ್ಪಾಡಿ








































