ಕಾರ್ಕಳ ಬಿಜೆಪಿ ನೂತನ ಪದಾಧಿಕಾರಿಗಳ ಸಭೆ

Picture of RB NEWS

RB NEWS

Bureau Report

ಪತ್ರಿಕಾ ಪ್ರಕಟಣೆ ಕೃಪೆಗಾಗಿ:

ಕಾರ್ಕಳ; ಏ:02: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೂತಮಟ್ಟದ ಕಾರ್ಯಕರ್ತರ ಸಮಾವೇಶವು ಏಪ್ರಿಲ್‌ 05ರಂದು ಜರುಗಲಿದ್ದು, ಅದರ ಪೂರ್ವಭಾವಿಯಾಗಿ ಮಂಗಳವಾರ ವಿಕಾಸ ಚುನಾವಣಾ ಕಚೇರಿಯಲ್ಲಿ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯು ನಡೆಯಿತು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕರು ವಿ ಸುನಿಲ್‌ ಕುಮಾರ್‌ ಮಾತನಾಡಿ, ನರೇಂದ್ರ ಮೋದಿಯವರು ಒಂದು ದಿನವೂ ವಿಶ್ರಾಂತಿ ಪಡೆಯದೆ ದೇಶಕ್ಕಾಗಿ ಕೆಲಸವನ್ನು ಮಾಡುತ್ತಿದ್ದಾರೆ ಅಂತಾದರೆ, ನಾವು ನಮ್ಮ ಬೂತಿನಲ್ಲಿ ಮತ್ತು ಪಕ್ಷಕ್ಕಾಗಿ ಎಷ್ಟು ಸಮಯವನ್ನು ನೀಡುತ್ತಿದ್ದೇವೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ಕಾರ್ಕಳದಲ್ಲಿ ಪಕ್ಷದ ಜವಾಬ್ದಾರಿಗಳನ್ನು ಓರ್ವ ಕಾರ್ಯಕರ್ತ ತೆಗೆದುಕೊಳ್ಳುತ್ತಾನೆ ಅಂತಾದರೆ ಅವನು ಪೂರ್ಣ ಪ್ರಮಾಣದ ಸಮಯವನ್ನು ಪಕ್ಷಕ್ಕಾಗಿ ನೀಡಿರುವುದರಿಂದ ಆಯ್ಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವಮೋರ್ಚಾ, ಮಹಿಳಾ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ ವಿವಿಧ ಚಟುಚಟಿಕೆಗಳನ್ನು ಹಮ್ಮಿಕೊಂಡಿದೆ.

ಸಣ್ಣ ಸಣ್ಣ ಬದಲಾವಣೆಗಳನ್ನು ಮಾಡುತ್ತಾ, ಅದಕ್ಕೆ ಪೂರಕವಾದ ಕೆಲಸಗಳನ್ನು ಮಾಡಬೇಕಾಗಿದೆ. ಕಾರ್ಯದ ಒತ್ತಡಗಳು ಎಷ್ಟೇ ಇದ್ದರೂ ಪಕ್ಷದ ಕೆಲಸಕ್ಕಾಗಿ ಪ್ರತಿಯೊಬ್ಬರು ಅರಿತುಕೊಂಡು ಕೆಲಸ ಮಾಡಬೇಕು. ಪ್ರಥಮವಾಗಿ ಪದಾಧಿಕಾರಿಯಾಗಿ ಗ್ರಾಮ ಮಟ್ಟದಲ್ಲಿ ಸಕ್ರೀಯರಾದರೆ ಮಾತ್ರ ತಾಲೂಕು, ಜಿಲ್ಲೆ ಮತ್ತು ರಾಜ್ಯದಲ್ಲಿ ಮಾದರಿಯಾಗಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಒಂದುಕಡೆ ಸೇರಿಕೊಂಡು ಹೊಂದಾಣಿಕೆಯಿಂದ ಕೆಲಸ ಮಾಡುವುದೇ ರಾಜಕಾರಣ ಎಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಚುನಾಯಿತ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಯಾವ ರೀತಿ ಕೆಲಸ ಮಾಡಬೇಕೆಂಬುದಾಗಿ ತಿಳಿಸಿದರು. ದೇಶದ ಭವಿಷ್ಯ ಮತ್ತು ಅಭಿವೃದ್ಧಿಯನ್ನು ಮನದಲ್ಲಿಟ್ಟು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿ ಮೋದಿಜಿಯವರನ್ನು ಗೆಲ್ಲಿಸೋಣ ಎಂದು ಭರವಸೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯರಾಮ್‌ ಸಾಲ್ಯಾನ್‌, ಜಿಲ್ಲಾ ವಕ್ತಾರ ಮುಟ್ಲುಪಾಡಿ ಸತೀಶ್‌ ಶೆಟ್ಟಿ, ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಉದಯ್‌ ಎಸ್.‌ ಕೋಟ್ಯಾನ್‌, ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪ್ರಸಾದ್‌ ಐಸಿರ, ತಾಲೂಕು ಯುವಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ ಕುಕ್ಕುಂದೂರು, ಸೂರ್ಯಕಾಂತ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್‌ ಪೂಜಾರಿ ಬೋಳ ಮತ್ತು ಶಿವಪುರ ಸುರೇಶ್‌ ಶೆಟ್ಟಿ ಹಾಗೂ ಜೆಡಿಎಸ್‌ ಪಕ್ಷದ ಜಿಲ್ಲಾಧ್ಯಕ್ಷ ಶ್ರೀಕಾಂತ್‌ ಕುಚ್ಚೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top