ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಣಿ ಸಭೆ; ಕುಕ್ಕುಂದೂರು ಗ್ರಾ. ಪಂಚಾಯತ್ ಮಾಜಿ ಉಪಾದ್ಯಕ್ಷ ಸುಂದರ ಕಾಂಗ್ರೆಸ್ ಸೇರ್ಪಡೆ

Picture of RB NEWS

RB NEWS

Bureau Report

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಪ್ರಥಮ ಕಾರ್ಯಕಾರಿಣಿ ಸಭೆಯು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಶುಭದರಾವ್ ಅದ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮೀಣ ಸಮಿತಿಯ ಅದ್ಯಕ್ಷರುಗಳು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳ ಉಪಸ್ಥಿತಿಯಲ್ಲಿ ನಡೆಯಿತು.

ಸಭೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ನೂತನವಾಗಿ ಆಯ್ಕೆಯಾದ ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮೀಣ ಸಮಿತಿಯ ಅಧ್ಯಕ್ಷರುಗಳು, ಮತ್ತು ವಿವಿಧ ಘಟಕಗಳ ಅದ್ಯಕ್ಷರುಗಳನ್ನು ಶಾಲು ಹೊದಿಸಿ ಅಭಿನಂದಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಪಕ್ಷದ ಬಲವರ್ಧನೆ ಗಾಗಿ ಶ್ರಮಿಸುವಂತೆ ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ವಿವಿಧ ಘಟಕಗಳ ನೂತನ ಅಧ್ಯಕ್ಷ ಪದಾಧಿಕಾರಿಗಳ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವಿವರಿಸಿದರು.

ಹಿರಿಯ ವಕೀಲರು, ಕಾಂಗ್ರೆಸ್ ಮುಖಂಡರಾದ ಶೇಖರ ಮಡಿವಾಳರವರು ಮಾತನಾಡುತ್ತಾ ಪ್ರಸ್ತುತ ದೇಶವನ್ನು ಆಳುತ್ತಿರುವರಿಂದ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಸಂವಿಧಾನ ಇರುವ ಕಾರಣ ಇಂದು ದೇಶದ ಜನ ಸಾಮಾನ್ಯನೂ ಸಮಾನ ಹಕ್ಕುಗಳಿಂದ ಬದುಕುವಂತಾಗಿದೆ, ಇಂತಹ ಶ್ರೇಷ್ಠ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್ ಸಂದರ್ಬೋಚಿತವಾಗಿ ಮಾತನಾಡಿದರು.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಒಗ್ಗೂಡುವಿಕೆಯೊಂದಿಗೆ ಆರಂಭವಾಗಲಿರುವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಕಳ ಪ್ರವರ್ತಕರಾದ ಅನಿಲ್ ಪೂಜಾರಿ ಮಾಳ ಅವರು ಸೊಸೈಟಿಯ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ಉಮೇಶ್ ರಾವ್ ಬಜಗೋಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಡಾ. ಪ್ರೇಮದಾಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಕ್ರಮ ಸಕ್ರಮ ಸಮಿತಿಯ ಸದಸ್ಯ ರಮೇಶ್ ಬಜಕಳ ಅವರು ನಾಡ ಭಕ್ತಿ ಗೀತೆಯನ್ನು ಹಾಡಿದರು. ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಸ್ವಾಗತಿಸಿದರು. ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ಧನ್ಯವಾದವನ್ನಿತ್ತರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top