ಕಾರ್ಕಳ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ಸಹಿತ 9 ಮಂದಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ
ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿವಿ ಘಟಕ 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ದೆ ಸೆ.15ರಂದು ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ನಡೆಯುವ ಪ್ರೇರಣಾ ದಿವಸ್- 2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


ಈ ಬಾರಿ ಜೀವಮಾನದ ಸಾಧನೆಗಾಗಿ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, ಶಿಕ್ಷಣ ತಜ್ಞ ಡಾ. ಶಂಕರ್ ರಾವ್ ಅವರನ್ನು ಮಾಡಲಾಗಿದೆ. ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಾ.ಜಗದೀಶ್ ಬಾಳ ಮತ್ತು ಉಜಿರೆ ಎಸ್ ಡಿ ಎಂ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ.ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಟೆಪ್ರೊ. ವಿಶಾಲಾಕ್ಷಿ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಪ್ರಿನ್ಸಿಪಾಲ್ ಡಾ. ಮಂಜುನಾಥ್ ಕೋಟ್ಯಾನ್ ಮತ್ತು ವಿರಾಜಪೇಟೆ ಕಾವೇರಿ ಕಾಲೇಜಿನ/ನಿವೃತ್ತ ಪ್ರಿನ್ಸಿಪಾಲ್ ಡಾ.ಆನಂದ ಕಾರ್ಲಾ ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನ ಗ್ರಂಥಪಾಲಕ · ಡಾ.ವಾಸಪ್ಪ ಗೌಡ ಮತ್ತು ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಕುಂದಾಪುರ ಭಂಡಾ ರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಕ ಕೆ.ಶಂಕರನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.





































