ಕಾರ್ಕಳ: ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ — ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ
RB NEWS
Bureau Report
ಕಾರ್ಕಳ: ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ — ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ
ಕಾರ್ಕಳ: 2027ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕದ ಅಂಗವಾಗಿ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ ₹1.59 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಹಿನ್ನೆಲೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 25ರಂದು ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಮಹಾಮಸ್ತಕಾಭಿಷೇಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಂ. ವೀರಪ್ಪ ಮೊಯಿಲಿ ಅವರೊಂದಿಗೆ ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸಿ ಅನುದಾನ ನೀಡುವ ಭರವಸೆ ನೀಡಿದ್ದರು. ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ₹1.59 ಕೋಟಿ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಗಿದೆ. ಕೊಟ್ಟ ಮಾತಿನಂತೆ ತ್ವರಿತವಾಗಿ ಅನುದಾನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಕಳ ಜನತೆಯ ಪರವಾಗಿ ಉದಯ ಶೆಟ್ಟಿ ಮುನಿಯಾಲು ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.