
ಕಾರ್ಕಳ ರಂಗಾಯಣ ಭ್ರಷ್ಟಾಚಾರ : ತನಿಖೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ
ಕಾರ್ಕಳ : ಕಾರ್ಕಳ ರಂಗಾಯಣ ಸಭಾಂಗಣ ನಿರ್ಮಾಣ ಕಾಮಗಾರಿಯಲ್ಲಿ ಹಳೆಯ ಮರ, ಕಳಪೆ ವಸ್ತುಗಳನ್ನು ಉಪಯೋಗಿಸಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಈ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ಇಂಟಕ್ ಜಿಲ್ಲಾದ್ಯಕ್ಷ ಕಿರಣ್ ಹೆಗ್ಡೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ,ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಸಂತೋಷ್ ದೇವಾಡಿಗ ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ಜಿಲ್ಲಾ ಹಿಂದುಳಿದ ವರ್ಗಗಳ ಉಪಾದ್ಯಕ್ಷ ಲಕ್ಷ್ಮೀಶ್ ಶೆಟ್ಟಿ, ರಾಜ್ಯ ಎಸ್.ಸಿ ಘಟಕದ ಸದಸ್ಯ ಕೇಶವ ಸಾಲಿಯಾನ್ ಹೆಜಮಾಡಿ, ಕಾಪು ಬ್ಲಾಕ್ ಇಂಟಕ್ ಘಟಕದ ಅಧ್ಯಕ್ಷ ಸುಮನ್ ಬೋಳಾರ್ ಉಪಸ್ಥಿತರಿದ್ದರು.
Post Views: 215





































