ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಪೋಸ್ಟ್ – ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
RB NEWS
Bureau Report
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಪೋಸ್ಟ್ – ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಟ್ಟೆಯ ಶ್ರೀಧರ್ ಆಚಾರ್ಯ ಎಂಬಾತನ ವಿರುದ್ಧ ಈ ಪ್ರಕರಣ ದಾಖಲಾಗಿದ್ದು, ಈ ಕುರಿತು ಮುಸ್ಲಿಂ ಮುಖಂಡ ಮಿಯಾರಿನ ಶೇಖ್ ಶಬ್ಬೀರ್ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಜುಲೈ 20ರಂದು ಸಂಜೆ ಸುಮಾರು 7 ಗಂಟೆಯ ವೇಳೆ ಶೇಖ್ ಶಬ್ಬೀರ್ ಅವರು ತಮ್ಮ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣ ವೀಕ್ಷಣೆ ಮಾಡುತ್ತಿದ್ದಾಗ, ಶ್ರೀಧರ್ ಆಚಾರ್ಯ ಎಂಬಾತನು ಮುಸ್ಲಿಂ ಧರ್ಮವನ್ನು ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಪ್ರಕಟಿಸಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಆ ಪೋಸ್ಟ್‌ನಲ್ಲಿ ಮೋದಿ ಸರ್ಕಾರ ಬೀಳಿಸಲು ನಮಾಜ್ ಮಾಡುವವರಿಗೆ ಮಾತ್ರ ಸಲಹೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಕೂಡ ಉಲ್ಲೇಖಿಸಿರುವುದಾಗಿ ಆರೋಪಿಸಲಾಗಿದೆ.
ಶ್ರೀಧರ್ ಆಚಾರ್ಯ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಜಾತಿ, ಧರ್ಮ ಹಾಗೂ ಜನಾಂಗಗಳ ನಡುವೆ ವೈಷಮ್ಯ ಉಂಟುಮಾಡುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.