ಮೈಸೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.


ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.



























