ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ- 2026ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷರಾಗಿ ಆಯ್ಕೆ
RB NEWS
Bureau Report
ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ- 2026 ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷರಾಗಿ ಆಯ್ಕೆ
ಕಾಸರಗೋಡು : ನುಳ್ಳಿಪ್ಪಾಡಿಯ ಕನ್ನಡ ಭವನದ ಬಯಲು ರಂಗಮಂಟಪದಲ್ಲಿ ದಿನಾಂಕ 22.02.2026 ಭಾನುವಾರ ಬೆಳಿಗ್ಗೆ ಸಾಮೂಹಿಕ ಸಂಕೀರ್ತನೆಯೊಂದಿಗೆ ಆರಂಭವಾಗಿ ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆಗೊಳ್ಳಲಿರುವ “ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026”ರ ಸರ್ವಾಧ್ಯಕ್ಷರಾಗಿ, ಕರ್ನಾಟಕ ಸರ್ಕಾರದ ಪ್ರತಿಷ್ಠಿತ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಪುರಸ್ಕೃತರಾದ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ, ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ನಾಡೋಜ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು, ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಅವರ ಸವಿನಯ ಅಪೇಕ್ಷೆಯನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ. ನಾಡೋಜ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರ ನೇತೃತ್ವದಲ್ಲಿ ಈ ಸಮ್ಮೇಳನವು ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ನಡೆಯಲಿದೆ ಎಂದು ಪರಿಷತ್ತಿನ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.