ಉಡುಪಿ: ಕುಂದಾಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿ ಯಾಗಿ ಮಹೇಶ್ಚಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಹೇಶ್ಚಂದ್ರ ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕುಂದಾಪುರ ಉಪ ವಿಭಾಗಾಧಿಕಾರಿ ಆಗಿದ್ದ ರಶ್ಮೀ ಆರ್.ಎಸ್. ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶ ನೀಡಲಾಗಿದೆ.


























