ಕುಂದಾಪುರ ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಅವರಿಗೆ ಅಭಿನಂದನೆ

Picture of RB NEWS

RB NEWS

Bureau Report

ಕಾರ್ಕಳ : ಕುಂದಾಪುರ ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ . ಅರುಣ್ ಕುಮಾರ್ ಎಸ್.ವಿ, ಅವರು ಸರಕಾರಿ ಸೇವೆಯಲ್ಲಿ ಒಟ್ಟು 36 ವರ್ಷ 8 ತಿಂಗಳ ಕಾಲ ಸೇವೆ ಸಲ್ಲಿಸಿ 30 ಜೂನ್ 2024ರಂದು ಸೇವೆಯಿಂದ ವಯೋನಿವೃತ್ತಿ ಹೊಂದಿದ್ದರು.

ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೋಡುರಸ್ತೆಯ ರಾಜಪುರ ಸಾರಸ್ವತಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ಜುಲಾಯಿ 6ರ ಅಪರಾಹ್ನ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕಾರ್ಕಳದ ರಾಮಕ್ಷತ್ರಿಯ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಗುರುಪ್ರಸಾದ್ ರಾವ್ ಅಜೆಕಾರ್ ಮತ್ತು ಪದಾಧಿಕಾರಿಗಳು, ಸದಸ್ಯರು ಸೇರಿ ಪಾಲ್ಗೊಂಡು ಗೌರವಿಸಿ, ಸನ್ಮಾನಿಸಿ, ಶುಭ ಹಾರೈಸಿದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top