






ಕುಂದಾಪುರ : ಚಿನ್ನಾಭರಣ ಕಳ್ಳತನ ಪ್ರಕರಣ : ದಂಪತಿಯ ಸೆರೆ
ಕುಂದಾಪುರ : ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಬಳಿಯ ಉದಯ ಪೂಜಾರಿ ಎಂಬವರ ಮನೆಯಲ್ಲಿ ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರವನ್ನು ಕಳ್ಳತನ ಮಾಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ ಪೊಲೀಸರು, ಕುಂದಾಪುರ ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ (30) ಎಂಬವರನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತರಿಂದ ಕಳವು ಮಾಡಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ ಒಟ್ಟು 2 ಲಕ್ಷ ಮೌಲ್ಯದಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಟಿವಿಎಸ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

































