ಕುಖ್ಯಾತ ಸರಕಳ್ಳರಿಬ್ಬರ ಬಂಧನ

Picture of RB NEWS

RB NEWS

Bureau Report

2024  ಡಿಸೆಂಬರ್ 06ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿಸೋಜಾ ರವರು ಕತ್ತಿನಿಂದ ಚಿನ್ನದ ಚೈನ್ ಎಗರಿಸಿದ ಘಟನೆ ನಡೆದಿತ್ತು.‌
ಸುಜಿನಾ ಡಿಸೋಜಾ ಅಂಗನವಾಡಿಯಲ್ಲಿ ಕೆಲಸದಲ್ಲಿರುವ ಸಮಯ ಮದ್ಯಾಹ್ನ 1.15 ಗಂಟೆ ಸುಮಾರಿಗೆ ಇಬ್ಬರು ಬೈಕಿನಲ್ಲಿ ಅಂಗನವಾಡಿಗೆ ಬಂದು, ಬೈಕಿನಿಂದ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದರು. 

ಸುಜಿನಾ ಡಿಸೋಜಾ ರವರು ಮಂಜನಾಡಿಗೆ ಹೋಗುವ ದಾರಿಯನ್ನು ಹೇಳಿ, ಅಂಗನವಾಡಿಯ ಬಾಗಿಲನ್ನು ಹಾಕುವಷ್ಟರಲ್ಲಿ ಬಾಗಿಲನ್ನು ದೂಡಿ ಅಂಗನವಾಡಿಯ ಒಳಗೆ ಪ್ರವೇಶಿಸಿ, ಸುಜಿನಾ ಡಿಸೋಜಾ ರವರ ಕುತ್ತಿಗೆಯ ಚಿನ್ನದ ಸರವನ್ನು ಸುಲಿಗೆ ಮಾಡಿ ಆರೋಪಿಗಳು ಬೈಕ್ ಸಮೇತ ಪರಾರಿಯಾಗಿರುತ್ತಾರೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

2024 ಡಿಸೆಂಬರ್ 09 ರಂದು ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಬೋಳ ಗ್ರಾಮದ ಸುಂಕಮಾರು- ಮಂಜರಪಲ್ಕೆ ಎಂಬಲ್ಲಿ ಘಟನೆ ನಡೆದಿತ್ತು. 

ಸಾರ್ವಜನಿಕ ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಸಂತಿ ಎಂಬವರಲ್ಲಿ ಬೈಕ್ ನಲ್ಲಿ ಬಂದ ಯುವಕ ಮತ್ತು ಯುವತಿ ಭಾಸ್ಕರ್ ಎಂಬವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿದರು.

ಬೈಕ್ ಸವಾರನು ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ  ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಸಿಸಿ ಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿದರು. 
  ಅದರ ಮೇರೆಗೆ ಅವರ ಪತ್ತೆಗಾಗಿ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿಯಲ್ಲಿದ್ದಾನೆ ಮಾಹಿತಿ ಬಂದಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ  ನಡೆಸಿ  ಆರೋಪಿಗಳನ್ನು ಬಂಧಿಸಿದ್ದಾರೆ. 
ಎಂಬವರನ್ನು ದಸ್ತಗಿರಿ ಮಾಡಿ ಹಬೀಬ್ ಹಸನ್ @ಚೊಂಬುಗುಡ್ಡೆ ಹಬೀಬ್ @ ಅಬ್ಬಿ ಎಂಬಾತನ ವಶದಿಂದ ಕಾರ್ಕಳದಿಂದ ಸುಲಿಗೆ ಮಾಡಿದ 17.43 ಗ್ರಾಂ ಚಿನ್ನದ ಸರ, ಸರಕಳ್ಳತನ ಮಾಡಲು ಉಪಯೋಗಿಸಿದ ಕೆಎ-19-ವಿ-9160 ನೇ ಹೀರೋ ಹೊಂಡಾ ಬೈಕ್, ಚೂರಿ-1 ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈತನನ್ನು ದಸ್ತಗಿರಿ ಮಾಡಲು ಪೊಲೀಸರು ಬಂದಾಗ ಅವರಿಗೆ ಹಲ್ಲೆ ನಡೆಸಲು ಈ ಚೂರಿಯನ್ನು ಇಟ್ಟುಕೊಂಡಿದ್ದನು.

ಆರೋಪಿಗಳಿಬ್ಬರು ಈ ಹಿಂದೆ 2 ತಿಂಗಳ ಹಿಂದೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ದಸ್ತಗಿರಿಯಾಗಿ ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದವರು  2024 ಡಿಸೆಂಬರ್ ೦6 ರಂದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದರು. 

ಅದೇ ದಿನವೇ ಮಂಗಳೂರು ನಗರದ ಜೈಲ್ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ ಆರೋಪಿಗಳಿಬ್ಬರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು.

ಅಲ್ಲದೇ 2 ದಿನ ಬಿಟ್ಟು ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ನ್ನು ಕಳವು ಮಾಡಿ ಅದೇ ಬೈಕ್ ನಲ್ಲಿ ಆರೋಪಿ ಹಬೀಬ್ ನು ಆತನ ಸ್ನೇಹಿತೆ ಮಹಿಳೆಯ ಜೊತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿರುವುದು ಬೆಳಕಿಗೆ‌ ಬಂದಿದೆ.‌

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ 24 ಗಂಟೆ ಒಳಗಡೆ ಆರೋಪಿಯನ್ನು ಹಾಗೂ ಸುಲಿಗೆ ಮಾಡಿದ ಸೊತ್ತನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top