ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ತೀವ್ರ ಆಕ್ಷೇಪ- ರಾಜ್ಯಾಧ್ಯಕ್ಷ ಶ್ರೀಧರ ಗೌಡ
RB NEWS
Bureau Report
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ತೀವ್ರ ಆಕ್ಷೇಪ- ರಾಜ್ಯಾಧ್ಯಕ್ಷ ಶ್ರೀಧರ ಗೌಡ
ಕಾರ್ಕಳ :ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ಕುರಿತು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆಯೊಂದನ್ನು ಹೊರಡಿಸಿದ ಅವರು ಪರಿಶಿಷ್ಟ ಪಂಗಡದಲ್ಲಿ 52 ಸಮುದಾಯಗಳಿದ್ದು ಸರಕಾರದ ವಿಭಿನ್ನ ನಿಲುವು , ಧೋರಣೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಇನ್ನೂ ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
ಅರಣ್ಯಾಧಾರಿತ ಆದಿವಾಸಿ ಬುಡಕಟ್ಟು ಜನಾಂಗದವರ. ಆರ್ಥಿಕ ,ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತೀರಾ ಶೋಚನೀಯ ವಾಗಿದ್ದು ಇದೆಲ್ಲವನ್ನು ಸರಕಾರ ಸೂಕ್ಷ್ಮವಾಗಿ ಗಮನಿಸದೇ ಪದೇಪದೇ ಹೊಸ ಹೊಸ ಜಾತಿಗಳನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರವನ್ನು ಮಾಡುತ್ತಲೇ ಬಂದಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಯೋಚನೆಯನ್ನು ಮಾಡದೆ ದ್ರೋಹವನ್ನು ಮಾಡಲಾಗಿದೆ. ಪರಿಶಿಷ್ಟ ಪಂಗಡದ ಸೇರ್ಪಡೆಗೆ ಸಾಂವಿಧಾನಿಕವಾಗಿ ಕನಿಷ್ಠ ಮಾನದಂಡಗಳು ಇಲ್ಲದಿದ್ದರೂ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಸ್ವತಹ, ಮುಖ್ಯಮಂತ್ರಿಗಳೇ ಆಸಕ್ತಿವಹಿಸಿ ಸಂವಿಧಾನದ ಆಶಯವನ್ನು ಗಾಳಿಗೆ ತೂರಿದ್ದಾರೆ ಎಂದು ಮಲೆಕುಡಿಯಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ತಿಳಿಸಿರುತ್ತಾರೆ.