



ಕುಸಿದು ಬಿದ್ದ ಉಪನ್ಯಾಸಕಿ ಮೃತ್ಯು
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರು ನಗರದ ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಮೃತಪಟ್ಟ ದುರ್ದೈವಿ. ನ.8ರಂದು ಮಧ್ಯಾಹ್ನ ಊಟ ಮಾಡಿ ಕಾಲೇಜಿಗೆ ಬಂದ ಕೂಡಲೇ ತಲೆಸುತ್ತು ಬಂದು ಕುಸಿದು ಬಿದ್ದಿದ್ದರು.
ಬಜ್ಜೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ನಾ ಪ್ಲೇವಿಯಾ ದಂಪತಿಯ ಪುತ್ರಿ ಗ್ಲೋರಿಯಾ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೋಮಾ ಸ್ಥಿತಿಯಲ್ಲಿದ್ದ ಗ್ಲೋರಿಯಾ ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ನ.13ರಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ (ಎಂ.ಕಾಂ) ಪೂರೈಸಿ ಕಳೆದ ಜುಲೈನಲ್ಲಿ ಉಪನ್ಯಾಸಕಿಯಾಗಿ ಕೆಲಸಕ್ಕೆ ಸೇರಿದ ಅವರು ಬಿ.ಕಾಂ ಪದವಿ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇಂದು ನಿಧನರಾದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ಅವರ ಅಂಗಾಂಗಳನ್ನು ಆಸ್ಪತ್ರೆಯಲ್ಲಿ ವಿವಿಧ ಸ್ವೀಕೃತದಾರರಿಗೆ ರವಾನಿಸಲಾಗಿದೆ. ಮೃತರ ಕುಟುಂಬದ ಒಪ್ಪಿಗೆಯಂತೆ ಅಂಗಾಂಗ ದಾನ ಮಾಡಲಾಯಿತು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ





































