ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರವಿಶಂಕರ ಶೇರಿಗಾರ್

Picture of RB NEWS

RB NEWS

Bureau Report

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರವಿಶಂಕರ್ ಶೇರಿಗಾರ್ ರವರನ್ನು ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಧುಬಂಗಾರಪ್ಪ ನೇಮಕ ಮಾಡಿದ್ದಾರೆ.

ರವಿಶಂಕರ್ ಶೇರಿಗಾರ್ ರವರು ಕಳೆದ ೨೫ ವರ್ಷಗಳಿಂದ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಪ್ರದಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

೨೦೧೩ರಿಂದ ೨೦೧೮ರವರೆಗೆ ಭಾರತೀಯ ನೈರುತ್ಯ ರೈಲ್ವೆಯ ಸಲಹಾ ಸಮಿತಿ ಸದಸ್ಯರಾಗಿ ೨೦೧೭ರ ಗೋವಾ ರಾಜ್ಯದ ಪೋಂಡ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಎಐಸಿಸಿಯಿಂದ ನೇಮಕಗೊಂಡು ಪಕ್ಷದ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಕೆಪಿಸಿಸಿ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದ್ದರು.

ಮಾಜಿಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ನಿರ್ದೇಶನದಂತೆ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ಶಿಫಾರಸ್ಸಿನಂತೆ, ಮುಖಂಡರುಗಳಾದ ಉದಯ ಶೆಟ್ಟಿ ಮುನಿಯಲು, ಮಂಜುನಾಥ್ ಪೂಜಾರಿ ಮುದ್ರಾಡಿ ಸಹಕಾರದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.‌

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top