ಕೈ ಹಿಡಿದ ಬಿಜೆಪಿ ಶಾಸಕನ ಪುತ್ರ

Picture of RB NEWS

RB NEWS

Bureau Report

ಉತ್ತರಕನ್ನಡ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹಾಗೂ ಅವರ ಬೆಂಬಲಿಗರು ಶಿರಸಿಯ ಬನವಾಸಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ, ಬನವಾಸಿ ಬ್ಲಾಕ್ ಸಂಯುಕ್ತಾಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವೇಕ್ ಹೆಬ್ಬಾರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಇನ್ನು ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top