ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯ ಮನೆಯೊಂದರಲ್ಲಿ ಕೊಲೆಗೀಡಾದ ಯುವತಿ ಅಂಜಲಿ ಅಂಬಿಗೇರ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದರುವ ಘಟನೆ ನಡೆದಿದೆ.
ಅಕ್ಕ ಅಂಜಲಿ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ತಂಗಿ ಯಶೋಧಾ ಅವರು ಮನೆಯಲ್ಲಿಯೇ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಮೇ 15ರ ನಸುಕಿನ ಜಾವದಲ್ಲಿ ಹುಬ್ಬಳ್ಳಿಯ ವೀರಾಪುರ ಓಣಿಯ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ವಿಶ್ವ ಅಲಿಯಾಸ್ ಗಿರೀಶ್(21)
ಮನೆ ಮಂದಿಗೆ ಕೊಲೆ ಬೆದರಿಕೆಯೊಡ್ಡಿ ಅಂಜಲಿ(20)ಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದನು.
ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್(21)ನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.






































