ಕೊಲ್ಲೂರು ದೇವಸ್ಥಾನ ಕಳ್ಳತನ ಪ್ರಕರಣ: 24 ಗಂಟೆಗಳಲ್ಲಿ ಮೂವರು ಆರೋಪಿಗಳ ಬಂಧನ

Picture of RB NEWS

RB NEWS

Bureau Report


ಕೊಲ್ಲೂರು, ಜುಲೈ 06, 2026: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಗಳ ಒಳಗಾಗಿ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.‌ ಘಟನೆ ವರದಿಯಾಗಿದೆ.

ಪ್ರಕರಣದ ದೂರುದಾರರಾಗಿರುವ ನಿಮಿಷಾ ಹಾಗೂ ಅವರ ಗಂಡ ಪ್ರಜೋಶ್ ಅವರು ಕೊಲ್ಲೂರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಗೆ ದರ್ಶನಕ್ಕಾಗಿ ತೆರಳಿದ್ದರು. ದರ್ಶನ ಮುಗಿಸಿ ರಾತ್ರಿ ಸುಮಾರು 8.20 ಗಂಟೆ ವೇಳೆಗೆ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ಅವರ ಬಳಿ ಇದ್ದ ಕಂದು ಬಣ್ಣದ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಜಿಪ್ ತೆರೆದಿರುವುದು ಗಮನಕ್ಕೆ ಬಂದಿತ್ತು.


ತಕ್ಷಣ ಪರಿಶೀಲಿಸಿದಾಗ ಬ್ಯಾಗಿನೊಳಗಿದ್ದ ಸುಮಾರು ₹80,000 ನಗದು ಇದ್ದ ಪರ್ಸ್ ಕಾಣೆಯಾಗಿರುವುದು ಬೆಳಕಿಗೆ ಬಂದಿತ್ತು. ದೇವಸ್ಥಾನದ ಸುತ್ತಮುತ್ತ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗದ ಹಿನ್ನೆಲೆಯಲ್ಲಿ, ಈ ಕುರಿತು ಕುಂದಾಪುರ ಉಪವಿಭಾಗದ ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಕೊಲ್ಲೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಕ್ರಮಾಂಕ 43/2026 ರಂತೆ ಕಲಂ 303(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪಾಧೀಕ್ಷಕ ಎಚ್.ಡಿ. ಕುಲಕುರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಪೊಲೀಸ್ ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ತನಿಖಾ ಪಿಎಸ್‌ಐ ಭೀಮಶಂಕರ್ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡವು ತಕ್ಷಣ ಕಾರ್ಯಾಚರಣೆ ಆರಂಭಿಸಿತು.
ಸಿಸಿಟಿವಿ ದೃಶ್ಯಗಳು, ಸಾರ್ವಜನಿಕರಿಂದ ಪಡೆದ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದೆ.


ಬಂಧಿತ ಆರೋಪಿಗಳು:
ನೇತ್ರಾವತಿ (33), ಗಂಡ: ನಿಂಗೇಶ್, ವಾಸ: ಹೊಸಮನೆ, 4ನೇ ಕ್ರಾಸ್, ಭದ್ರಾವತಿ, ಶಿವಮೊಗ್ಗ ಜಿಲ್ಲೆ
ಶಾರದ (50), ಗಂಡ: ದಿ. ದುರ್ಗಪ್ಪ, ವಾಸ: ಭೋವಿ ಕಾಲೋನಿ, ಉಡುಗಲಮ್ಮ ದೇವಸ್ಥಾನ ಹತ್ತಿರ, ಭದ್ರಾವತಿ, ಶಿವಮೊಗ್ಗ ಜಿಲ್ಲೆ
ದುರ್ಗಮ್ಮ (44), ಗಂಡ: ಅಶೋಕ್, ವಾಸ: ಹೊಸ ಭೋವಿ ಕಾಲೋನಿ, ಉಡುಗಲಮ್ಮ ದೇವಸ್ಥಾನ ಹತ್ತಿರ, ಭದ್ರಾವತಿ, ಶಿವಮೊಗ್ಗ ಜಿಲ್ಲೆ.

ಆರೋಪಿಗಳನನು ಪ್ರಕರಣ ದಾಖಲಾದ 24 ಗಂಟೆಗಳೊಳಗೆ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. , ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತನಿಖೆಯಲ್ಲಿ ತಿಳಿದುಬಂದಂತೆ, ಆರೋಪಿತ ದುರ್ಗಮ್ಮ ಅವರ ವಿರುದ್ಧ ಮೈಸೂರು ಲಸ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳ್ಳತನ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ. ಶಾರದ ಅವರ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರು ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿ ಒಟ್ಟು ಮೂರು ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top