ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಬಂದಿದ್ದ ಮಹಿಳೆ ನಾಪತ್ತೆ : ಸೌರ್ಪಾಣಿಕ ನದಿಯತ್ತ ಹೋದರೆ?


ಕುಂದಾಪುರ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ.
ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ ನಂತರ ಅವರು ಬೇರೆ ಬೇರೆ ದೇಗುಲಗಳಿಗೆ ತೆರಳಿ ನಂತರ ಸೌಪರ್ಣಿಕಾ ನದಿಯತ್ತ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದಾರೆ.

ಪೊಲೀಸರು ಮತ್ತು ಸ್ಥಳೀಯರು ಸೌಪರ್ಣಿಕಾ ನದಿಯ ಸುತ್ತಮುತ್ತ ವ್ಯಾಪಕ ಶೋಧ ಕಾರ್ಯ ನಡೆಸಿದರೂ ಅವರ ಯಾವುದೇ ಸುಳಿವು ಪತ್ತೆಯಾಗಿಲ್ಲ. ಅವರ ಮೊಬೈಲ್ ಫೋನ್ ಮತ್ತು ಇತರೆ ವಸ್ತುಗಳು ಕಾರಿನಲ್ಲಿ ಪತ್ತೆಯಾಗಿದ್ದು, ಇದು ಅಧಿಕಾರಿಗಳು ಅವರ ಗುರುತು ಪತ್ತೆಹಚ್ಚಲು ಮತ್ತು ಅವರ ಕುಟುಂಬಕ್ಕೆ ಮಾಹಿತಿ ನೀಡಲು ಸಹಾಯ ಮಾಡಿದೆ.

ಶ್ರೀಕ್ಷೇತ್ರದ ಪರಿಸರದಲ್ಲಿ ಅಳವಡಿಸಿದ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ದೃಶ್ಯಾವಳಿ….






































