[t4b-ticker]

ಕೋಕಾ ಕಾಯ್ದೆಯಡಿ ಕುಖ್ಯಾತ ರೌಡಿಗಳಾದ ಮನೋಜ್ ಕೋಡಿಕೆರೆ ಮತ್ತು ಚೇತು ಪಡೀಲ್ ಬಂಧನ

Picture of RB NEWS

RB NEWS

Bureau Report

ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ

ಚೇತನ್ @ ಚೇತು ಪಡೀಲ್

ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಬಹುಮಾನವನ್ನು ಪೊಲೀಸ್ ಇಲಾಖೆ ವಿತರಿಸಿದೆ.

ಕೋಟ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್ @ ಚೇತು ಪಡೀಲ್ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ್ದ ಪೊಲೀಸರು, ಮಾಹಿತಿ ನೀಡುವವರಿಗೆ 50,000 ನಗದು ಬಹುಮಾನ ಘೋಷಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು.

ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಿ ಚೇತನ್ @ ಚೇತು ಪಡೀಲ್ನನ್ನು 2026ರ ಏಪ್ರಿಲ್ 30ರಂದು ಹಾಗೂ ಮತ್ತೋರ್ವ ಆರೋಪಿ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆಯನ್ನು 2026ರ ಜೂನ್ 11ರಂದು ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳಲ್ಲಿ ಮನೋಜ್ ಕೋಡಿಕೆರೆ ವಿರುದ್ಧ ಉಡುಪಿ ಜಿಲ್ಲೆಯಲ್ಲಿ 2 ಮತ್ತು ಮಂಗಳೂರು ನಗರದಲ್ಲಿ 17 ಪ್ರಕರಣಗಳು, ಒಟ್ಟು 19 ಪ್ರಕರಣ ಗಳು ದಾಖಲಾಗಿದ್ದು, 3 ಕೊಲೆ ಪ್ರಕರಣ, 5 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 10 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿ ಚೇತನ್ ವಿರುದ್ಧ ಉಡುಪಿ-2, ದಕ್ಷಿಣ ಕನ್ನಡ -2 ಮತ್ತು ಮಂಗಳೂರು ನಗರ-9 ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, 2 ಕೊಲೆ, 2 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 2 ಮಾದಕ ದ್ರವ್ಯ ಸೇವನೆ ಮತ್ತು 6 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳ ಬಂಧನಕ್ಕೆ ನೆರವಾದ ಬಾತ್ಮೀದಾರರಿಗೆ ಘೋಷಿಸಿದ್ದ ನಗದು ಬಹುಮಾನವನ್ನು ಪೊಲೀಸ್ ಇಲಾಖೆಯಿಂದ ವಿತರಿಸಲಾಗಿದೆ.

ಅಪರಾಧ ತಡೆ ಹಾಗೂ ಅಪರಾಧಿಗಳ ಪತ್ತೆ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದಾಗಿ ಮುಂದೆಯೂ ಇದೇ ರೀತಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top