ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ನ್ಯಾಯಾಲಯ ಸಮನ್ಸ್‌ ಜಾರಿ

Picture of RB NEWS

RB NEWS

Bureau Report

ಬೆಂಗಳೂರು : ಉಡುಪಿ-ಚಿಕ್ಕಮಗಳೂರು‌ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ.

ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ 30 ರಂದು ಕಟಪಾಡಿಯ ತ್ರಿಶಾ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಲಾಗಿತ್ತು.

ಈ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕೋರ್ಟ್  ಆದೇಶ ಹೊರಡಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top