
ಕ್ರಿಯೇಟಿವ್ ಕಾಲೇಜಿನಲ್ಲಿ ಯುವ ಬರಹಗಾರರ ಸಮ್ಮೇಳನ “ಅಕ್ಷರ ಯಾನ”
ಎಸ್.ಎನ್. ಸೇತುರಾಮ್, ಪ್ರಕಾಶ್ ಬೆಳವಾಡಿ, ಪ್ರತಾಪ್ ಸಿಂಹ ರವರು ಭಾಗಿ
ಕಾರ್ಕಳ : ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ ‘ಅಕ್ಷರಯಾನ – ಬರವಣಿಗೆಯ ಮೆರವಣಿಗೆ’ ಕಾರ್ಯಕ್ರಮವು ಅಕ್ಟೋಬರ್ ೩೦ರ ಮಂಗಳವಾರ ಬೆಳಗ್ಗೆ ೯:೩೦ಕ್ಕೆ ಆರಂಭಗೊಳ್ಳಲಿದೆ.
ಈ ಸಮಾರಂಭದ ಉದ್ಘಾಟಕರಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ರವರು ಆಗಮಿಸಲಿದ್ದಾರೆ.
ಯುವ ಸಾಹಿತ್ಯಾಸಕ್ತರಿಗೆ ಸ್ಪೂರ್ತಿದಾಯಕ ಮಾತುಗಳ ಜೊತೆಯಲ್ಲಿ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ರಂಗ ಕಲಾವಿದ, ನಟ, ನಿರ್ದೇಶಕ ಎಸ್.ಎನ್. ಸೇತುರಾಮ್ , ಕನ್ನಡ ಸಿನಿಮಾರಂಗದ ನಿರ್ದೇಶಕ ಮತ್ತು ನಟ ಪ್ರಕಾಶ್ ಬೆಳವಾಡಿ ಹಾಗೂ ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿರುವ, ತೀಕ್ಷ÷್ಣ ಲೇಖನ ಹಾಗೂ ಯುವಪ್ರಜ್ಞೆ ಮತ್ತು ಉತ್ಸಾಹದ ಪ್ರತಿನಿಧಿಯಂತೆ ರಾಜಕೀಯದಲ್ಲೂ ತಮ್ಮ ಗುರುತು ಕಟ್ಟಿಕೊಂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹರವರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಯುವ ಬರಹಗಾರರಿಗೆ ಹಾಗೂ ಸಾಹಿತ್ಯಾಸಕ್ತರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.ಪುಸ್ತಕಮನೆ ವತಿಯಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.


















